ಜಮ್ಮು-ಕಾಶ್ಮೀರ: ಕರ್ತವ್ಯದಲ್ಲಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಸಾಂದರ್ಭಿಕ ಚಿತ್ರ | PTI
ಹೊಸದಿಲ್ಲಿ: ಜಮ್ಮು- ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಜಕೋಟೆ ಪ್ರದೇಶದ ಅಂಜನವಾಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೇನಾ ಸಿಬ್ಬಂದಿ ಇಂದೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು.
ಇಂದೇಶ್ ಕುಮಾರ್ ಕರ್ತವ್ಯದಲ್ಲಿದ್ದಾಗಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story