ಖಾತೆ ಹಂಚಿಕೆ ಬಗ್ಗೆ ಕೆಲವರು ಅಸಮಾಧಾನಗೊಂಡಿದ್ದಾರೆ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್
ಅಜಿತ್ ಪವಾರ್ | PC :PTI
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಮರುದಿನವೇ, ಖಾತೆಗಳ ಹಂಚಿಕೆ ಬಗ್ಗೆ ಕೆಲವರು ಅಸಮಾಧಾನಗೊಂಡಿದ್ದಾರೆ ಎಂದು ರವಿವಾರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
“ಸಚಿವರ ಸಂಖ್ಯೆ ಹೆಚ್ಚಿರುವುದರಿಂದ, ಮುಖ್ಯಮಂತ್ರಿ ಫಡ್ನವಿಸ್ ಪ್ರತಿಯೊಬ್ಬ ಸಚಿವರಿಗೂ ಒಂದು ಖಾತೆ ಹಂಚಿಕೆ ಮಾಡಿದ್ದಾರೆ. ಸಹಜವಾಗಿಯೇ, ಇದರಿಂದ ಕೆಲವರು ಅಸಮಾಧಾನಗೊಂಡಿದ್ದಾರೆ” ಎಂದು ತಮ್ಮ ಸ್ವಕ್ಷೇತ್ರ ಬಾರಾಮತಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದ್ದಾರೆ.
ಮಹತ್ವದ ಹಣಕಾಸು ಖಾತೆಯನ್ನು ಪಡೆದ ನಂತರ, ತಮ್ಮ ಸ್ವಕ್ಷೇತ್ರ ಬಾರಾಮತಿಯಲ್ಲಿ ರೋಡ್ ಶೋ ನಡೆಸಿದ ಅಜಿತ್ ಪವಾರ್, ಹಲವು ಸನ್ಮಾನ ಸಮಾರಂಭಗಳಲ್ಲಿ ಭಾಗವಹಿಸಿದರು. ಈ ವೇಳೆ, ಸೋಮವಾರ ನಾನು ಅಧಿಕಾರ ಸ್ವೀಕರಿಸಲಿದ್ದೇನೆ ಎಂದು ಅವರು ಪ್ರಕಟಿಸಿದರು.
Next Story