ನೀಟ್ ಪರೀಕ್ಷೆಯಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ : ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್ | PC : PTI
ಹೊಸದಿಲ್ಲಿ, : ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರವಿವಾರ ತಿಳಿಸಿದರು.
ಒಡಿಶಾದಿಂದ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಶಿಫಾರಸುಗಳ ಮೇರೆಗೆ 1,563 ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಆದೇಶಿಸಲಾಗಿದೆ. ಎರಡು ಸ್ಥಳಗಳಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ. ಸರಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ)ಯ ಹಿರಿಯ ಅಧಿಕಾರಿಗಳು ಸಹ ತಪ್ಪಿತಸ್ಥರೆಂದು ಕಂಡು ಬಂದರೂ ಅವರನ್ನು ಬಿಡುವುದಿಲ್ಲ ಎಂದ ಅವರು, ಸರಕಾರವು ಈ ಬಗ್ಗೆ ಕಳವಳಗೊಂಡಿದೆ. ಯಾವುದೇ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಅತ್ಯಂತ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.
ಎನ್ಟಿಎದಲ್ಲಿ ಬಹಳಷ್ಟು ಸುಧಾರಣೆಗಳ ಅಗತ್ಯವಿದೆ ಎಂದು ಪ್ರಧಾನ್ ಇದೇ ವೇಳೆ ಹೇಳಿದರು.
Next Story