ಅಂಬೇಡ್ಕರ್ ಕುರಿತ ಹೇಳಿಕೆ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ
PC : PTI
ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಬಿಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಗುರುವಾರ ದೇಶಾದ್ಯಂತ ಪ್ರತಿಭಟನೆಯನ್ನು ಆಯೋಜಿಸಿದೆ.
ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿಗಳಲ್ಲಿ (ಪಿಸಿಸಿ) ದೇಶಾದ್ಯಂತ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಬಿಆರ್ ಅಂಬೇಡ್ಕರ್ ಕುರಿತು ಅಮಿತ್ ಶಾ ಅವರ ಹೇಳಿಕೆಗಳು ಕೋಲಾಹಲ ಉಂಟುಮಾಡಿದೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಆರ್ಜೆಡಿ, ಎಡಪಕ್ಷಗಳು ಮತ್ತು ಶಿವಸೇನೆ-ಯುಬಿಟಿ ಸೇರಿದಂತೆ ಬಹುತೇಕ ಎಲ್ಲ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಟೀಕಿಸಿದ್ದು, ಸಂಸತ್ತಿನ ಉಭಯ ಸದನಗಳನ್ನು ಬುಧವಾರ ಮುಂದೂಡಲು ಕಾರಣವಾಯಿತು.
Next Story