ಪಿ ಎಫ್ ಐ ನಾಯಕ ಇ.ಅಬೂಬಕರ್ ರನ್ನು ವೈದ್ಯಕೀಯ ಪರೀಕ್ಷೆಗೆ ಏಮ್ಸ್ ಆಸ್ಪತ್ರೆಗೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ
ಸುಪ್ರೀಂ ಕೋರ್ಟ್ | PTI
ಹೊಸದಿಲ್ಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿ ಎಫ್ ಐ) ಮಾಜಿ ಅಧ್ಯಕ್ಷ ಇ.ಅಬೂಬಕರ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಎರಡು ದಿನಗಳಲ್ಲಿ ಅವರನ್ನು ದಿಲ್ಲಿಯ ಏಮ್ಸ್ ಗೆ ಸ್ಥಳಾಂತರಿಸುವಂತೆ ಸೂಚಿಸಿದೆ.
ಕ್ಯಾನ್ಸರ್ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಇ.ಅಬೂಬಕರ್ ಅವರು ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅವರನ್ನು ಎರಡು ದಿನಗಳಲ್ಲಿ ದಿಲ್ಲಿಯ ಏಮ್ಸ್ ಗೆ ಸ್ಥಳಾಂತರಿಸುವಂತೆ ಸೂಚಿಸಿದೆ. ಇದಲ್ಲದೆ ಚಿಕಿತ್ಸೆಯ ವೇಳೆ ಅವರ ಜೊತೆ ಇರಲು ಪುತ್ರನಿಗೆ ಅನುಮತಿ ನೀಡಿದೆ.
ಇದಲ್ಲದೆ ಇ.ಅಬೂಬಕರ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಪರೀಕ್ಷಿಸಿ ನಾಲ್ಕು ದಿನಗಳಲ್ಲಿ ವರದಿ ಸಲ್ಲಿಸುವಂತೆ ಏಮ್ಸ್ ನ ತಜ್ಞ ವೈದ್ಯರ ತಂಡಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
Next Story