ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಪರಿಗಣನೆ

ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ : ವಕ್ಫ್ (ತಿದ್ದುಪಡಿ) ಕಾಯ್ದೆಯ ಹಲವು ನಿಯಮಗಳು ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಹೊಸ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ.
ಹೊಸ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅದನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ನ್ಯಾಯವಾದಿ ವಿಷ್ಣು ಶಂಕರ್ ಜೈನ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನು ಒಳಗೊಂಡ ಪೀಠ ಗಮನಕ್ಕೆ ತೆಗೆದುಕೊಂಡಿತು.
ನಾವು ಈ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿ ಮುಂದಿನ ವಾರ ದಿನಾಂಕವನ್ನು ನೀಡಲಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಹೇಳಿದರು.
ಎಐಎಂಐಎಂ ನಾಯಕ ಅಸಾದುದ್ದೀನ್ ಉವೈಸಿ ಅವರ ಒಂದು ಅರ್ಜಿ ಸೇರಿದಂತೆ 10ಕ್ಕೂ ಅಧಿಕ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ. ವಿಶ್ವನಾಥ್ ಅವರನ್ನು ಒಳಗೊಂಡ ಪೀಠದ ಮುಂದೆ ಆಗಸ್ಟ್ 16ರಂದು ಈಗಾಗಲೇ ಪಟ್ಟಿ ಮಾಡಲಾಗಿದೆ.
ನ್ಯಾಯವಾದಿ ವಿಷ್ಣು ಶಂಕರ್ ಜೈನ್ ಉಲ್ಲೇಖಿಸಿದ ಅರ್ಜಿಯನ್ನು ಹರಿ ಶಂಕರ್ ಜೈನ್, ಮಣಿ ಮಂಜುಳಾ ಅವರು ಕೇಂದ್ರ ಸರಕಾರ, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ವಕ್ಫ್ ಮಂಡಳಿ ವಿರುದ್ಧ ಸಲ್ಲಿಸಿದ್ದಾರೆ.