ಜೀವಾವಧಿ ಶಿಕ್ಷೆ ಪ್ರಶ್ನಿಸಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಮೇಲ್ಮನವಿ: ಗುಜರಾತ್ ಸರಕಾರಕ್ಕೆ ಸುಪ್ರೀಂ ನೋಟಿಸ್
ಸಂಜೀವ್ ಭಟ್ (PTI)
ಹೊಸದಿಲ್ಲಿ : ಜಾಮ್ನಗರ ನ್ಯಾಯಾಲಯವು ವಿಧಿಸಿರುವ ಅಪರಾಧ ಮತ್ತು ಜೀವಾವಧಿ ಶಿಕ್ಷೆಯ ವಿರುದ್ಧದ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ, ಅರ್ಜಿ ಸಲ್ಲಿಸಿದ್ದ ಭಾರತೀಯ ಪೊಲೀಸ್ ಸೇವೆಯ ಮಾಜಿ ಅಧಿಕಾರಿ ಸಂಜೀವ್ ಭಟ್ ಅವರ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಮಂಗಳವಾರ ಗುಜರಾತ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
1990 ರಲ್ಲಿ ಕಸ್ಟಡಿ ಸಾವಿನ ಪ್ರಕರಣದಲ್ಲಿ ಸಂಜೀವ್ ಭಟ್ ಅವರಿಗೆ ಜಾಮ್ನಗರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ಭಾಲಚಂದ್ರ ವರಾಳೆ ಅವರ ಪೀಠವು ನೋಟಿಸ್ ನೀಡುವಾಗ, ನಾಲ್ಕು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.
ಸಂಜೀವ್ ಭಟ್ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್ ವಾದ ಮಂಡಿಸಿದರು.
Next Story