ದಿಲ್ಲಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವಂತೆ ದಿಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡಿದ್ದ ದಿಲ್ಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ದಿಲ್ಲಿ ಹೈಕೋರ್ಟ್ ನಿರ್ದೇಶನದ ವಿರುದ್ಧ ದಿಲ್ಲಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದ್ದು, ಈ ಕುರಿತು ಕೇಂದ್ರ ಸರ್ಕಾರ, ಏಮ್ಸ್ ಮತ್ತು ದಿಲ್ಲಿ ಮಹಾನಗರ ಪಾಲಿಕೆಗೆ ನೋಟಿಸ್ ಜಾರಿ ಮಾಡಿದೆ.
ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವಂತೆ ಎಎಪಿ ಸರ್ಕಾರಕ್ಕೆ ಈ ಮೊದಲು ದಿಲ್ಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.
ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಅನುಷ್ಠಾನಗೊಳಿಸುವುದನ್ನು ದಿಲ್ಲಿ ಸರ್ಕಾರ ವಿರೋಧಿಸಿತ್ತು. ಇದು ಈಗಾಗಲೇ ಜಾರಿಯಲ್ಲಿರುವ ಆರೋಗ್ಯ ರಕ್ಷಣಾ ಕ್ರಮಗಳನ್ನು ಕೆಳಮಟ್ಟಕ್ಕಿಳಿಸಿದಂತಾಗುತ್ತದೆ ಎಂದು ಹೇಳಿತ್ತು.
Next Story