ಸತ್ಯ ಶೋಧನಾ ಘಟಕ ಕುರಿತು ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆ
Photo: X/ @PIBFactCheck
ಹೊಸದಿಲ್ಲಿ: ನಕಲಿ ಸುದ್ದಿಗಳ ಸವಾಲನ್ನು ಎದುರಿಸಲು ಪ್ರೆಸ್ ಇನ್ಫಾರ್ಮೇಶನ್ ಬ್ಯುರೋ ಅಡಿಯಲ್ಲಿ ಸತ್ಯ ಶೋಧನಾ ಘಟಕ ಆರಂಭ ಕುರಿತಂತೆ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದ್ದರೆ ಸುಪ್ರೀಂ ಕೋರ್ಟ್ ಅದಕ್ಕೆ ಇಂದು ತಡೆಯಾಜ್ಞೆ ವಿಧಿಸಿದೆ ಹಾಗೂ ಕೇಂದ್ರ ಸರ್ಕಾರಕ್ಕೆ ತನ್ನ ಕ್ರಮ ಮುಂದುವರಿಸಿಕೊಂಡು ಹೋಗಲು ಬಾಂಬೆ ಹೈಕೋರ್ಟ್ ನೀಡಿದ್ದ ಅನುಮತಿಯನ್ನು ಬದಿಗೆ ಸರಿಸಿದೆ.
ಈ ವಿಚಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರಾ ಆವರ ಪೀಠ ಹೇಳಿದೆ.
Next Story