ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ : ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, “ನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ” ಎಂದು ತಿಳಿಸಿದೆ. ಜೊತೆಗೆ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ಸಂಬಂಧ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದೆ.
Next Story