ನೀಟ್-ಪಿಜಿ ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
Photo: ANI
ಹೊಸದಿಲ್ಲಿ: ರವಿವಾರ ನಡೆಯಲಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪರೀಕ್ಷೆ ಮುಂದೂಡುವಂತೆ ಕೋರಿ ನಾಲ್ಕು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಾಲಯ ವಜಾಗೊಳಿಸಿದೆ.
ಪರೀಕ್ಷೆಯನ್ನು ಮುಂದೂಡುವ ಮೂಲಕ ಸುಮಾರು 2 ಲಕ್ಷ ಅಭ್ಯರ್ಥಿಗಳ ಭವಿಷ್ಯವನ್ನು ಡೋಲಾಯಮಾನಗೊಳಿಸಲು ತಾನು ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Next Story