ಶಾಸಕರನ್ನು ನೇಮಿಸುವ ಜಮ್ಮು ಮತ್ತು ಕಾಶ್ಮೀರ ಲೆ. ಗವರ್ನರ್ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಐವರು ಶಾಸಕರನ್ನು ನೇಮಿಸುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು Live Law ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆದರೆ, ಈ ಸಂಬಂಧ ಹೈಕೋರ್ಟ್ ಮೊರೆ ಹೋಗಲು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ.
ಈ ವಿಷಯದ ಜ್ಯೇಷ್ಠತೆ ಕುರಿತು ತಾನು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ನ್ಯಾ. ಸಂಜೀವ್ ಖನ್ನಾ ಹಾಗೂ ನ್ಯಾ. ಸಂಜಯ್ ಕುಮಾರ್ ಅವರನ್ನೊಳಗೊಂಡಿದ್ದ ನ್ಯಾಯಪೀಠ ಸ್ಪಷ್ಟಪಡಿಸಿದೆ.
2019ರ ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ ಕಾಯ್ದೆಯ ಸೆಕ್ಷನ್ 15ಕ್ಕೆ ತರಲಾಗಿರುವ ತಿದ್ದುಪಡಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್‌ಗೆ ಐದು ಮಂದಿ ಶಾಸಕರನ್ನು ವಿಧಾನಸಭೆಗೆ ನಾಮಕರಣ ಮಾಡುವ ಅಧಿಕಾರವಿದೆ. ಹೀಗೆ ನಾಮಕರಣಗೊಳ್ಳುವ ಐವರು ಶಾಸಕರ ಪೈಕಿ ಮೂವರು ಶಾಸಕರು ಮಹಿಳೆಯರಾಗಿರಬೇಕಾಗುತ್ತದೆ.
Next Story