ನೀಟ್-ಯುಜಿ ಅಕ್ರಮ | ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ : ನೀಟ್-ಯುಜಿ 2024 ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಹಾಗೂ ನೀಟ್-ಯುಜಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 24 ಲಕ್ಷ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿವೆ.
ನೀಟ್-ಯುಜಿ 2024 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಮೇ 5ರಂದು ನಡೆಸಿತ್ತು. ಅಲ್ಲಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಸರಣಿ ವಿವಾದಕ್ಕೆ ನೀಟ್ ಪರೀಕ್ಷೆ ಗುರಿಯಾಗಿತ್ತು.
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳ ವಿಚಾರಣೆ ಜುಲೈ 8ರಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಈ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲ, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಆಲಿಕೆ ನಡೆಸಲಿದೆ.
Next Story