ಸುಪ್ರೀಂ ಕೋರ್ಟ್ ನ ಬಿಲ್ಕಿಸ್ ಪ್ರಕರಣದ ತೀರ್ಪು ಅಪರಾಧಿಗಳ ಪಾಲಕರನ್ನು ಬಯಲು ಮಾಡಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ | Photo: PTI
ಹೊಸದಿಲ್ಲಿ: ಬಿಲ್ಕಿಸ್ ಬಾನು ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದುರಹಂಕಾರಿ ಬಿಜೆಪಿ ಸರ್ಕಾರದ ವಿರುದ್ಧ ದಣಿವರಿಯದ ಹೋರಾಟ ನಡೆಸುತ್ತಿರುವ ಬಿಲ್ಕಿಸ್ ಬಾನು ಅವರ ನ್ಯಾಯದ ಗೆಲುವಿನ ಸಂಕೇತವಿದು” ಎಂದು ಬಣ್ಣಿಸಿದ್ದಾರೆ.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಚುನಾವಣಾ ಲಾಭಕ್ಕಾಗಿ ನ್ಯಾಯವನ್ನು ಕೊಲ್ಲುವ ಪ್ರವೃತ್ತಿಯು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಪಾಯಕಾರಿಯಾದುದು. ಇಂದು ಸುಪ್ರೀಂ ಕೋರ್ಟ್ ನಿರ್ಧಾರವು ಯಾರು ಅಪರಾಧಿಗಳ ಪಾಲಕರು ಎಂಬುದನ್ನು ದೇಶಕ್ಕೆ ಮತ್ತೊಮ್ಮೆ ಹೇಳಿದೆ” ಎಂದು ಹೇಳಿದ್ದಾರೆ.
ಈ ನಡುವೆ, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ, ಸುಪ್ರೀಂ ಕೋರ್ಟ್ ತೀರ್ಪು ಬಿಜೆಪಿಯ ಮಹಿಳಾ ವಿರೋಧಿ ನೀತಿಯ ಮೇಲಿದ್ದ ಪರದೆಯನ್ನು ಎಳೆದು ಹಾಕಿದೆ ಎಂದು ಪ್ರತಿಕ್ರಿಯಿಸಿದ್ದರು.
Next Story