ಸಿಕ್ಕಿಂ ಮುಖ್ಯಮಂತ್ರಿಯಾಗಿ ತಮಾಂಗ್ ಪ್ರಮಾಣ ವಚನ ಸ್ವೀಕಾರ
ಪ್ರೇಮಸಿಂಗ್ ತಮಾಂಗ್ | PC ; PTI
ಗಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್ಕೆಎಂ)ದ ಮುಖ್ಯಸ್ಥ ಪ್ರೇಮಸಿಂಗ್ ತಮಾಂಗ್ ಅವರು ಸೋಮವಾರ ಸತತ ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಪಾಲ ಲಕ್ಷ್ಮಣ ಪ್ರಸಾದ ಆಚಾರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಪಲ್ಜೋರ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಾಂಗ್ ಮತ್ತು ಅವರ ಸಂಪುಟದ ಸಚಿವರು ಪ್ರಮಾಣ ವಚನವನ್ನು ಸ್ವೀಕರಿಸಿದರು.
ಸಿಕ್ಕಿ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ 12 ಸದಸ್ಯ ಬಲವನ್ನು ಹೊಂದಿದೆ.
ತಮಾಂಗ್ ನೇತೃತ್ವದಲ್ಲಿ 32 ವಿಧಾನಸಭಾ ಸ್ಥಾನಗಳ ಪೈಕಿ 31ನ್ನು ಗೆದ್ದು ಭರ್ಜರಿ ವಿಜಯ ಸಾಧಿಸಿದ ಎಸ್ಕೆಎಂ,ರಾಜ್ಯದ ಏಕೈಕ ಲೋಕಸಭಾ ಸ್ಥಾನವನ್ನೂ ಗೆದ್ದುಕೊಂಡಿದೆ. 2019ರವರೆಗೆ 25 ವರ್ಷಗಳ ಕಾಲ ರಾಜ್ಯವನ್ನು ಆಳಿದ್ದ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್ಡಿಎಫ್) ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮಾಂಗ್ರನ್ನು ಅಭಿನಂದಿಸಿ ಟ್ವೀಟಿಸಿದ್ದಾರೆ.
Next Story