ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ದಿಲ್ಲಿ ಸರಕಾರ
Supreme Court of India. Credit: PTI Photo
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಶಾಹಿ ಮೇಲೆ ನಿಯಂತ್ರಣಕ್ಕಾಗಿ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ದಿಲ್ಲಿಯ ಆಪ್ ಸರಕಾರವು ಶುಕ್ರವಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದೆ.
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜು.೩ರಂದು ಪಕ್ಷದ ಕಚೇರಿಯಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಟ್ಟು ಹಾಕಲಿದ್ದಾರೆ ಎಂದು ಆಪ್ ಬೆಳಿಗ್ಗೆ ಪ್ರಕಟಿಸಿತ್ತು.
ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿ ಹೊರತುಪಡಿಸಿ ದಿಲ್ಲಿಯಲ್ಲಿ ಇತರ ಸೇವೆಗಳ ಮೇಲಿನ ನಿಯಂತ್ರಣವನ್ನು ಸರ್ವೋಚ್ಚ ನ್ಯಾಯಾಲಯವು ಚುನಾಯಿತ ಸರಕಾರಕ್ಕೆ ಹಸ್ತಾಂತರಿಸಿತ್ತು. ಒಂದು ವಾರದ ಬಳಿಕ ಜೂ.19ರಂದು ಕೇಂದ್ರವು ದಿಲ್ಲಿ ಸರಕಾರದ ಅಧಿಕಾರಶಾಹಿಯ ಮೇಲೆ ನಿಯಂತ್ರಣ ಸಾಧಿಸಲು ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.
Next Story