ಸಂಭಲ್ ಹಿಂಸಾಚಾರ ಆರೋಪಿಗಳ ಭಾವಚಿತ್ರದ ಭಿತ್ತಿ ಪತ್ರ ಪ್ರದರ್ಶಿಸಲಿರುವ ಜಿಲ್ಲಾಡಳಿತ
PC: PTI
ಸಂಭಲ್: ನ್ಯಾಯಾಲಯ ಮಸೀದಿ ಸಮೀಕ್ಷೆಗೆ ನೀಡಿದ ಆದೇಶದ ಕುರಿತಂತೆ ನವೆಂಬರ್ 24ರಂದು ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾದ ಆರೋಪಿಗಳ ಭಾವಚಿತ್ರ ಒಳಗೊಂಡ ಭಿತ್ತಿ ಪತ್ರಗಳನ್ನು ಸಾರ್ವಜನಿಕ ಸ್ಥಳದಲ್ಲಿ ಅಂಟಿಸಲಾಗುವುದು ಎಂದು ಸಂಭಲ್ ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ಗುರುವಾರ ತಿಳಿಸಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾದ 400ಕ್ಕೂ ಅಧಿಕ ವ್ಯಕ್ತಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅವರಲ್ಲಿ 32 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ಭಾವಚಿತ್ರವಿರುವ ಭಿತ್ತಿಪತ್ರಗಳನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಶೀಘ್ರ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಶತಮಾನದಷ್ಟು ಹಳೆಯ ಶ್ರೀ ಹರಿಹರ ದೇವಾಲಯದ ನಿವೇಶದಲ್ಲಿ ಮೊಗಲ್ ದೊರೆ ಬಾಬಾರ್ 1526ರಲ್ಲಿ ಮಸೀದಿ ನಿರ್ಮಿಸಿದ್ದಾನೆ ಎಂದು ಪ್ರತಿಪಾದಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯ ಮಸೀದಿ ಸಮೀಕ್ಷೆಗೆ ಆದೇಶ ನೀಡಿತ್ತು.
ಈ ಹಿನ್ನೆಲೆಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದರು.
Next Story