ಮುದುಮಲೈ ಅರಣ್ಯದಲ್ಲಿ ಹೆಣ್ಣು ಹುಲಿ ಸಾವು: ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ | PC : PTI
ತಮಿಳುನಾಡು: ನೀಲಗಿರಿ ಜಿಲ್ಲೆಯ ಮುದುಮಲೈ ಅರಣ್ಯದಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಈ ಕುರಿತು ಅರಣ್ಯ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಹುಲಿಯ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಗಸ್ತಿನಲ್ಲಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗೆ ಹುಲಿ ಸತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಈ ಕುರಿತು ಮೇಲಾಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಹುಲಿಯ ಸಾವಿಗೆ ಕಾರಣವನ್ನು ತಿಳಿಯಲು ತಜ್ಞರ ತಂಡದ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story