ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ತಿರುಪತಿಯಿಂದ ತಂದ ಲಡ್ಡು ವಿತರಣೆ: ಮುಖ್ಯ ಅರ್ಚಕ ಸತ್ಯೇಂದ್ರ ದಾಸ್
PC : PTI
ಹೊಸದಿಲ್ಲಿ: ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ತಿರುಪತಿ ದೇವಸ್ಥಾನದಿಂದ ತಂದ ಲಡ್ಡೂಗಳನ್ನು ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗಿದೆ ಎಂದು ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಆಂಧ್ರಪ್ರದೇಶದ ತಿರುಮಲ ದೇವಸ್ಥಾನದ ಪ್ರಸಾದದ ಲಡ್ಡೂನಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿತ್ತು ಎಂದು ಆಂಧ್ರ ಸಿಎಂ ಚಂದ್ರ ಬಾಬು ನಾಯ್ಡು ಆರೋಪದ ಬೆನ್ನಲ್ಲೇ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿಕೆ ನೀಡಿದ್ದಾರೆ.
ಎಷ್ಟು ಲಡ್ಡೂಗಳನ್ನು ತಂದಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಅದು ಟ್ರಸ್ಟ್ ಗೆ ತಿಳಿದಿದೆ. ಆದರೆ, ಬಂದ ಲಡ್ಡುಗಳನ್ನು ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗಿದೆ ಎಂದು ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನದಿಂದ ಒಂದು ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಅಯೋಧ್ಯೆಗೆ ಕಳುಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ 8,000 ವಿಶೇಷ ಆಹ್ವಾನಿತರು ಪಾಲ್ಗೊಂಡಿದ್ದರು.
Next Story