ಪಶ್ಚಿಮ ಬಂಗಾಳ ರಾಜ್ಯಪಾಲರಿಂದ ಚುನಾವಣೆಯಲ್ಲಿ ಹಸ್ತಕ್ಷೇಪ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು
PC : ANI (Ananda Bose)
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಹಸ್ತಕ್ಷೇಪ ನಡೆಸುತ್ತಿದ್ದಾರೆಂದು ತೃಣಮೂಲ ಕಾಂಗ್ರೆಸ್ ಪಕ್ಷವು ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಹಾಲಿ ಲೋಕಸಭಾ ಚುನಾವಣಾ ಪ್ರಕ್ರಿಯೆಗಳಲ್ಲಿ ಪದೇ ಪದೇ ಹಸ್ತಕ್ಷೇಪ ನಡೆಸುತ್ತಿರುವುದಕ್ಕಾಗಿ ಹಾಗೂ ಚುನಾವಣಾ ದಿನಾಂಕದಂದು ಮತದಾನ ನಡೆಯುವ ಪ್ರದೇಶಗಳಿಗೆ ಭೇಟಿ ನೀಡಲು ಯತ್ನಿಸುತ್ತಿರುವುದಕ್ಕಾಗಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿರುದ್ಧ ದೂರು ನೀಡಲಾಗಿದೆ’’ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.
ಮೊದಲ ಹಂತದ ಚುನಾವಣೆಯ ಮುನ್ನಾ ದಿನವಾದ ಗುರುವಾರದಂದು ಕೂಚ್ಬಿಹಾರ್ಗೆ ಪ್ರಸ್ತಾವಿತ ಭೇಟಿಯನ್ನು ರದ್ದುಪಡಿಸುವಂತೆ ಚುನಾವಣಾ ಆಯೋಗವು ಪಶ್ಚಿಮಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರಿಗೆ ಚುನಾವಣಾ ಆಯೋಗವು ಸಲಹೆ ನೀಡಿತ್ತು.
ಕೂಚ್ಬೆಹಾರನಲ್ಲಿ ಎಪ್ರಿಲ್ 19ರಂದು ಮತದಾನ ನಡೆಯಲಿದ್ದು, ಬುಧವಾರ ಸಂಜೆಯಿಂದ ಆ ಕ್ಷೇತ್ರದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಿಷೇಧಿಸಲಾಗಿದೆ.