ಪಶ್ಚಿಮ ಬಂಗಾಳ | ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ

ಸಾಂದರ್ಭಿಕ ಚಿತ್ರ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನೈಹತಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತೋಷ್ ಯಾದವ್ ಹತ್ಯೆಯಾದ ಟಿಎಂಸಿ ಕಾರ್ಯಕರ್ತ. ಸಂತೋಷ್ ಯಾದವ್ ಗೌರಿಪುರ ಪ್ರದೇಶದಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಓರ್ವ ಆರೋಪಿ ಗುಂಡಿಕ್ಕಿದ್ದಾನೆ. ಈ ವೇಳೆ ದಾಳಿಕೋರನಿಂದ ರಿವಾಲ್ವರ್ ಕಸಿದುಕೊಳ್ಳುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಆದರೆ ಅವರ ಮೇಲೆ ಇತರ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಒಂದು ಗುಂಡು ತಲೆಗೆ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story