ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಭಡ್ತಿ
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಹೆಸರನ್ನು ಶಿಫಾರಸು ಮಾಡಿದ ಕೆಲವು ದಿನಗಳ ನಂತರ, ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಬುಧವಾರ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾಗಿ ಭಡ್ತಿ ನೀಡಲಾಗಿದೆ.
ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಹಾಗೂ ಎಸ್. ವೆಂಕಟನಾರಾಯಣ ಭಟ್ಟಿ ಅವರ ನೇಮಕವನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.
ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಭೂಯಾನ್ ಹಾಗೂ ಕೇರಳದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಭಟ್ಟಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ 5 ರಂದು ಉನ್ನತ ನ್ಯಾಯಾಲಯಕ್ಕೆ ಭಡ್ತಿ ನೀಡಲು ಶಿಫಾರಸು ಮಾಡಿತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರ ಬಲವನ್ನು ಹೊಂದಿದೆ, ಸದ್ಯ 30 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ.
ಇಬ್ಬರು ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ ನಂತರ, ಸುಪ್ರೀಂ ಕೋರ್ಟ್ ನ ಕಾರ್ಯ ಶಕ್ತಿ 32 ಕ್ಕೆ ಏರುತ್ತದೆ, ಇನ್ನು ಎರಡು ಹುದ್ದೆಗಳು ಖಾಲಿ ಉಳಿದಿವೆ.