ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್ ಖಾಲಿದ್
ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದ ಖಾಲಿದ್ ಪರ ವಕೀಲ
ಉಮರ್ ಖಾಲಿದ್ (PTI)
ಹೊಸದಿಲ್ಲಿ: ಈಶಾನ್ಯ ದಿಲ್ಲಿಯಲ್ಲಿ 2020 ರಲ್ಲಿ ನಡೆದ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಹೋರಾಟಗಾರ ಉಮರ್ ಖಾಲಿದ್ ತಾನು ಸುಪ್ರೀಂ ಕೋರ್ಟಿನ ಮುಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ಹಿಂತೆಗೆದುಕೊಂಡಿದ್ದಾರೆ. ಹಿಂಪಡೆದುಕೊಳ್ಳಲಾಗಿದೆ ಎಂದು ಹೇಳಿಕೊಂಡು ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಸನ್ನಿವೇಶಗಳ ಬದಲಾವಣೆಯಿಂದಾಗಿ ಅರ್ಜಿಯನ್ನು ವಾಪಸ್ ಪಡೆದುಕೊಳ್ಳಲಾಗುತ್ತಿದೆ ಹಾಗೂ ತನ್ನ ಕಕ್ಷಿಗಾರ ವಿಚಾರಣಾ ನ್ಯಾಯಾಲಯದಿಂದ ಮತ್ತೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸುತ್ತಾರೆ ಎಂದು ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.
ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಹಾಗೂ ಪಂಕಜ್ ಮಿತ್ತಲ್ ಅವರ ಪೀಠ ಈ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ. ಆದರೆ ಖಾಲಿದ್ ವಿರುದ್ಧ ಹೇರಲಾದ ಯುಎಪಿಎ ಯ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಂದುವರಿಸುವುದಾಗಿ ಕಪಿಲ್ ಸಿಬಲ್ ಹೇಳಿದರು.
ಖಾಲಿದ್ ಅವರು ಸೆಪ್ಟೆಂಬರ್ 2020ರಿಂದ ಬಂಧನದಲ್ಲಿದ್ದಾರೆ.