ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

File Photo: PTI
ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.
"ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಯಾಗಿದೆ. ಅದಕ್ಕಾಗಿ ಅಗತ್ಯವಿರುವ ಹಣವನ್ನು ಆದಷ್ಟು ಬೇಗ ಮಂಜೂರು ಮಾಡಬೇಕು. ಅದಕ್ಕಾಗಿ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಪ್ರಿಯಾಂಕಾ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕೇರಳದ ವಯನಾಡ್ ನಲ್ಲಿ ಜುಲೈನಲ್ಲಿ ಅತ್ಯಂತ ಭೀಕರ ಭೂಕುಸಿತ ಸಂಭವಿಸಿತು. ನಾಲ್ಕು ಗ್ರಾಮಗಳು ಸಂಪೂರ್ಣವಾಗಿ ಕೊಚ್ಚಿ ಹೋದವು. 231 ಮಂದಿ ಮೃತಪಟ್ಟು, 47 ಮಂದಿ ನಾಪತ್ತೆಯಾಗಿದ್ದಾರೆ. 145 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, 170 ಮನೆಗಳು ಭಾಗಶಃ ನಾಶವಾಗಿವೆ. 240 ಮನೆಗಳು ವಾಸಯೋಗ್ಯವಲ್ಲವೆಂದು ಘೋಷಿಸಲಾಗಿದೆ ಮತ್ತು 183 ಮನೆಗಳು ಕೊಚ್ಚಿಹೋಗಿವೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ ಐದು ತಿಂಗಳ ನಂತರ ಕೇಂದ್ರ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ.
I am glad @AmitShah ji has finally taken the decision to declare the Wayanad tragedy as a “Disaster of Severe Nature”. This will greatly help those in need of rehabilitation and is definitely a step in the right direction.
— Priyanka Gandhi Vadra (@priyankagandhi) December 30, 2024
We will all be grateful if adequate funds for the same…