ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ಮಾಲಿನ್ಯ ಕಡಿಮೆಯಾಗುವುದಿಲ್ಲ: ಸದ್ಗುರು ಜಗ್ಗಿ ವಾಸುದೇವ್
ಜಗ್ಗಿ ವಾಸುದೇವ್ (Photo: PTI)
ಚಿಕ್ಕಬಳ್ಳಾಪುರ: ಇಂಧನ ಚಾಲಿತ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ಮಾಲಿನ್ಯ ಕಡಿಮೆಯಾಗುವುದಿಲ್ಲ ಎಂದು ಇಶಾ ಫೌಂಡೇಶನ್ ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ.
ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ನಗರಗಳಲ್ಲಿ ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಒಪ್ಪಿಕೊಂಡ ಸದ್ಗುರು ಜಗ್ಗಿ ವಾಸುದೇವ್, ಎಲೆಕ್ಟ್ರಿಕ್ ವಾಹನಗಳಿಂದ ಪರಿಸರದ ಮೇಲೆ ದೀರ್ಘಕಾಲೀನ ಪರಿಣಾಮಗಳು ಬೀಳುತ್ತದೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಅವಲಗುರ್ಕಿಯಲ್ಲಿರುವ ಇಶಾ ಯೋಗ ಕೇಂದ್ರದಲ್ಲಿ ಮಾತನಾಡಿದ ಸದ್ಗುರು ಜಗ್ಗಿ ವಾಸುದೇವ್, ಎಲೆಕ್ಟ್ರಿಕ್ ವಾಹನಗಳು ಪರಿಸರವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ನಮಗೆ ತಿಳಿಸಲಾಗಿದೆ. ಸಹಜವಾಗಿ, ಈ ವಾಹನಗಳು ಹೊಗೆಯನ್ನು ಹೊರಸೂಸುವುದಿಲ್ಲವಾದ್ದರಿಂದ, ಇದು ನಗರಗಳು ಮತ್ತು ಪಟ್ಟಣಗಳಿಗೆ ಒಳ್ಳೆಯದು. ಆದರೆ, ದೀರ್ಘಾಕಾಲೀನವಾಗಿ ಪರಿಸರಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.
ಇಶಾ ಫೌಂಡೇಶನ್ ಫೆಬ್ರವರಿಯಲ್ಲಿ 'ಮಿರಾಕಲ್ ಆಫ್ ಮೈಂಡ್ʼ(Miracle of Mind) ಎಂಬ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಿದೆ. ಇಶಾ ಫೌಂಡೇಶನ್ ಈ ಆ್ಯಪ್ ಮೂಲಕ ಜಗತ್ತಿನಾದ್ಯಂತ 300 ಕೋಟಿ ಜನರನ್ನು ತಲುಪುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.