ವಕ್ಫ್ ಮಸೂದೆ ಜಾತ್ಯತೀತ ವಿರೋಧಿ, ಅದು ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ : ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ | PC ; PTI
ಕೋಲ್ಕತಾ : ವಕ್ಫ್ (ತಿದ್ದುಪಡಿ) ಮಸೂದೆಯನ್ನು ಜಾತ್ಯತೀತ ವಿರೋಧಿ ಎಂದು ಗುರುವಾರ ಬಣ್ಣಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಅದು ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಹೇಳಿದರು.
ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಮಸೂದೆ ಕುರಿತು ಕೇಂದ್ರವು ರಾಜ್ಯಗಳೊಂದಿಗೆ ಸಮಾಲೋಚಿಸಿಲ್ಲ ಎಂದರು.
ಮಸೂದೆಯು ಒಕ್ಕೂಟ ವಿರೋಧಿ ಮತ್ತು ಜಾತ್ಯತೀತ ವಿರೋಧಿಯಾಗಿದೆ. ಅದು ನಿರ್ದಿಷ್ಟ ವರ್ಗವೊಂದಕ್ಕೆ ಕಳಂಕವನ್ನು ಹಚ್ಚುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಅದು ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಹೇಳಿದ ಬ್ಯಾನರ್ಜಿ, ಯಾವುದೇ ಧರ್ಮದ ಮೇಲೆ ದಾಳಿ ನಡೆದರೆ ಅದನ್ನು ತಾನು ಮನಃಪೂರ್ವಕವಾಗಿ ಖಂಡಿಸುವುದಾಗಿ ತಿಳಿಸಿದರು.
ಅಸ್ತಿತ್ವದಲ್ಲಿರುವ ವಕ್ಫ್ ಕಾಯ್ದೆಗೆ ಮಸೂದೆಯಲ್ಲಿ ಪ್ರಸ್ತಾವಿಸಿರುವ ತಿದ್ದುಪಡಿಗಳನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿದ್ದು, ಅವು ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಿವೆ.
ಈ ತಿದ್ದುಪಡಿಗಳು ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರುತ್ತವೆ ಮತ್ತು ಅವುಗಳನ್ನು ಹೊಣೆಗಾರರನ್ನಾಗಿ ಮಾಡುತ್ತವೆ ಎಂದು ಆಡಳಿತಾರೂಢ ಬಿಜೆಪಿ ಪ್ರತಿಪಾದಿಸಿದೆ.
ವಿವಾದಿತ ಮಸೂದೆಯನ್ನು ಪರಿಶೀಲಿಸಲು ಸಂಸದೀಯ ಸಮಿತಿಯನ್ನು ರಚಿಸಲಾಗಿದೆ.ಕೋಲ್ಕತಾ : ವಕ್ಫ್ (ತಿದ್ದುಪಡಿ) ಮಸೂದೆಯನ್ನು ಜಾತ್ಯತೀತ ವಿರೋಧಿ ಎಂದು ಗುರುವಾರ ಬಣ್ಣಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಅದು ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಹೇಳಿದರು.
ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಮಸೂದೆ ಕುರಿತು ಕೇಂದ್ರವು ರಾಜ್ಯಗಳೊಂದಿಗೆ ಸಮಾಲೋಚಿಸಿಲ್ಲ ಎಂದರು.
ಮಸೂದೆಯು ಒಕ್ಕೂಟ ವಿರೋಧಿ ಮತ್ತು ಜಾತ್ಯತೀತ ವಿರೋಧಿಯಾಗಿದೆ. ಅದು ನಿರ್ದಿಷ್ಟ ವರ್ಗವೊಂದಕ್ಕೆ ಕಳಂಕವನ್ನು ಹಚ್ಚುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಅದು ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಹೇಳಿದ ಬ್ಯಾನರ್ಜಿ, ಯಾವುದೇ ಧರ್ಮದ ಮೇಲೆ ದಾಳಿ ನಡೆದರೆ ಅದನ್ನು ತಾನು ಮನಃಪೂರ್ವಕವಾಗಿ ಖಂಡಿಸುವುದಾಗಿ ತಿಳಿಸಿದರು.
ಅಸ್ತಿತ್ವದಲ್ಲಿರುವ ವಕ್ಫ್ ಕಾಯ್ದೆಗೆ ಮಸೂದೆಯಲ್ಲಿ ಪ್ರಸ್ತಾವಿಸಿರುವ ತಿದ್ದುಪಡಿಗಳನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿದ್ದು, ಅವು ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಿವೆ.
ಈ ತಿದ್ದುಪಡಿಗಳು ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರುತ್ತವೆ ಮತ್ತು ಅವುಗಳನ್ನು ಹೊಣೆಗಾರರನ್ನಾಗಿ ಮಾಡುತ್ತವೆ ಎಂದು ಆಡಳಿತಾರೂಢ ಬಿಜೆಪಿ ಪ್ರತಿಪಾದಿಸಿದೆ.
ವಿವಾದಿತ ಮಸೂದೆಯನ್ನು ಪರಿಶೀಲಿಸಲು ಸಂಸದೀಯ ಸಮಿತಿಯನ್ನು ರಚಿಸಲಾಗಿದೆ.