ವಯನಾಡ್ ಭೂಕುಸಿತ | ಮೃತರ ಕುಟುಂಬಕ್ಕೆ 6 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್ | PC : PTI
ತಿರುವನಂತಪುರಂ : ವಯನಾಡ್ ಭೂಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆರು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ವಯನಾಡ್ ಭೂಕುಸಿತದಿಂದಾಗಿ ಕನಿಷ್ಠ 400ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. 4 ಲಕ್ಷ ರೂ.ಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮತ್ತು ಉಳಿದ 2 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
STORY | Kerala landslides: CM Vijayan announces Rs 6 lakh compensation to kin of deceased
— Press Trust of India (@PTI_News) August 14, 2024
READ: https://t.co/t27pRJNFeQ#WayanadLandslides #WayanadDisaster
(PTI File Photo) pic.twitter.com/W4YF4ZTS2e
ಭೂಕುಸಿತದಲ್ಲಿ ಕಣ್ಣು ಮತ್ತು ಕೈಕಾಲುಗಳನ್ನು ಕಳೆದುಕೊಂಡ ಅಥವಾ ಶೇ.60 ರಷ್ಟು ಅಂಗವೈಕಲ್ಯಕ್ಕೆ ಒಳಗಾದವರಿಗೆ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ 75,000 ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.