ವಯನಾಡ್ ಭೂಕುಸಿತ: 728 ಕುಟುಂಬಗಳಿಗೆ ತಾತ್ಕಾಲಿಕ ಪುನರ್ವಸತಿ ವ್ಯವಸ್ಥೆ
PC : PTI
ಕೋಝಿಕ್ಕೋಡ್: ವಯನಾಡ್ ಭೂಕುಸಿತದಿಂದಾಗಿ ನೆಲೆ ಕಳೆದುಕೊಂಡ 778 ಕುಟುಂಬಗಳಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇರಳ ಸರ್ಕಾರ ಶನಿವಾರ ತಿಳಿಸಿದೆ.
ಪರಿಹಾರ ಶಿಬಿರಗಳಲ್ಲಿದ್ದ ಈ ಕುಟುಂಬಗಳನ್ನು ಈಗಾಗಲೇ ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರದ ಪ್ರಕಟಣೆಯ ಪ್ರಕಾರ ಒಟ್ಟು 2,569 ಮಂದಿಯನ್ನು ಸರ್ಕಾರಿ ಮತ್ತು ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಪುನರ್ವಸತಿಗೊಂಡಿರುವ ಕುಟುಂಬಗಳಿಗೆ 'ಬ್ಯಾಕ್ ಟು ಹೋಮ್' ಕಿಟ್ ನೀಡುವ ಕಾರ್ಯ ಆರಂಭಿಸಲಾಗಿದೆ. ಕಿಟ್ ನಲ್ಲಿ ಪೀಠೋಪಕರಣಗಳು, ಕಿಚನ್ ಕಿಟ್, ಆಹಾರ ಸಾಮಗ್ರಿ ಕಿಟ್, ನೈರ್ಮಲ್ಯ ಕಿಟ್ ಗಳಿವೆ.
Next Story