ವಯನಾಡ್ ಭೂಕುಸಿತ| ಆರನೆಯ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಮೃತರ ಸಂಖ್ಯೆ 350ಕ್ಕೆ ಏರಿಕೆ
Photo: PTI
ವಯನಾಡ್: ಭೂಕುಸಿತ ಪೀಡಿತ ಉತ್ತರ ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಆರನೆಯ ದಿನಕ್ಕೆ ಕಾಲಿಟ್ಟಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಅಧಿಕವಿರುವ ಪ್ರದೇಶಗಳಲ್ಲಿ ಹೆಚ್ಚು ರಕ್ಷಣಾ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ ಎಂದು ರವಿವಾರ ರಾಜ್ಯ ಪ್ರವಾಸೋದ್ಯಮ ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ಹೇಳಿದ್ದಾರೆ.
ಅಧಿಕೃತ ದಾಖಲೆಗಳ ಪ್ರಕಾರ, ಮುಂಡಕ್ಕೈ ಹಾಗೂ ಚೂರಲ್ ಮಲ ಗ್ರಾಮಗಳಿಂದ ಇಲ್ಲಿಯವರೆಗೆ 206 ಮಂದಿ ನಾಪತ್ತೆಯಾಗಿದ್ದಾರೆ.
ಸುಧಾರಿತ ರೇಡಾರ್ ಗಳು ಹಾಗೂ ಭಾರಿ ಗಾತ್ರದ ಯಂತ್ರೋಪಕರಣಗಳನ್ನು ರಕ್ಷಣಾ ಕಾರ್ಯಾಚರಣೆಯ ತಂಡಗಳು ಬಳಸುತ್ತಿವೆ.
Next Story