ರಾಜಸ್ಥಾನ | ಸುರಂಗ ಭಾಗ ಕುಸಿತ ,ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ | PC : PTI
ಕೋಟಾ : ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಭಾಗವೊಂದು ಕುಸಿದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ ಹಾಗೂ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ರವಿವಾರ ಹೇಳಿದ್ದಾರೆ.
ಈ ಸುರಂಗ ದಿಲ್ಲಿ-ಮುಂಬೈ ಎಕ್ಸ್ಪ್ರೆಸ್ ವೇಯ ಭಾಗವಾಗಿದೆ ಎಂದು ಕೋಟಾ ಗ್ರಾಮೀಣದ ಪೊಲೀಸ್ ಅಧೀಕ್ಷಕ ಸುಜಿತ್ ಶಂಕರ್ ಹೇಳಿದ್ದಾರೆ.
ರಾಮ್ಗಂಜ್ ಮಂಡಿಯ ಮೊಡಾಕ್ ಪ್ರದೇಶದಲ್ಲಿ ಶನಿವಾರ ರಾತ್ರಿ ಸುರಂಗದ ಭಾಗವೊಂದು ಕುಸಿದಿದೆ ಎಂದು ಅವರು ತಿಳಿಸಿದ್ದಾರೆ.
ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲಾಯಿತು ಹಾಗೂ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರಲ್ಲಿ ಶಂಶೇರ್ ಸಿಂಗ್ (33) ಮೃತಪಟ್ಟರು. ಗಾಯಗೊಂಡ ಇತರ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಶಂಕರ್ ತಿಳಿಸಿದ್ದಾರೆ.
ಘಟನೆಯ ನಂತರ ಪೊಲೀಸರು ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ದ ಅಧಿಕಾರಿಗಳು ಘಟನಾ ಸ್ಥಳಕ್ಕೆ ತಲುಪಿದ್ದರು.
Next Story