ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೊ ಪ್ರಕರಣ ರದ್ದತಿಯ ಕುರಿತು ಮಾರ್ಚ್ 2ಕ್ಕೆ ಆದೇಶ : ಪಟಿಯಾಲ ಹೌಸ್ ಕೋರ್ಟ್
ಬ್ರಿಜ್ ಭೂಷಣ್ ಶರಣ್ ಸಿಂಗ್ | Photo: PTI
ಹೊಸದಿಲ್ಲಿ : ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ)ನ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಿಸಿ, ಅಪ್ರಾಪ್ತ ಕುಸ್ತಿಪಟು ಸಲ್ಲಿಸಿದ್ದ ಪೊಸ್ಕೊ ಪ್ರಕರಣ ರದ್ದುಗೊಳಿಸುವಂತೆ ಕೋರಿ ದಿಲ್ಲಿ ಪೊಲೀಸರ ಅರ್ಜಿ ಸ್ವೀಕರಿಸಬೇಕೆ ಎಂಬುದರ ಕುರಿತು ದಿಲ್ಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಮಾರ್ಚ್ 2 ರಂದು ತನ್ನ ಆದೇಶವನ್ನು ಪ್ರಕಟಿಸಲಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಕುರಿತು ಗುರುವಾರ ಆದೇಶ ಹೊರಡಿಸಬೇಕಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಛಾವಿ ಕಪೂರ್ ಅವರು ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳ ಅಗತ್ಯವಿದೆ ಎಂದು ಹೇಳಿದರು ಎನ್ನಲಾಗಿದೆ. ಪಟಿಯಾಲ ಹೌಸ್ ಕೋರ್ಟ್ಗೆ ಪೊಲೀಸರು ಸಲ್ಲಿಸಿರುವ 550 ಪುಟಗಳ ವರದಿಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಭೂಷಣ್ ವಿರುದ್ಧದ ಆರೋಪಗಳಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
Next Story