ಡಿಕೆಶಿ ​ನಾಳೆ ಬೆಳಗ್ಗೆ ಸಿಎಂ ಆಗೋದಾದ್ರೆ ಜೆಡಿಎಸ್​ನ 19 ಶಾಸಕರ ಬೆಂಬಲ: ಎಚ್.​ಡಿ. ಕುಮಾರಸ್ವಾಮಿ ಹೇಳಿದ್ದೇನು?

Update: 2023-11-04 17:26 IST
ಡಿಕೆಶಿ ​ನಾಳೆ ಬೆಳಗ್ಗೆ ಸಿಎಂ ಆಗೋದಾದ್ರೆ ಜೆಡಿಎಸ್​ನ 19 ಶಾಸಕರ ಬೆಂಬಲ: ಎಚ್.​ಡಿ. ಕುಮಾರಸ್ವಾಮಿ ಹೇಳಿದ್ದೇನು?
  • whatsapp icon

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು​ ನಾಳೆ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ. 

ಶನಿವಾರ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ನಮ್ಮ ಶಾಸಕರಿಗೆ ಸುಮ್ಮನೇ ಕರೆ ಮಾಡಿ ಪಕ್ಷಕ್ಕೆ ಬನ್ನಿ, ಮಂತ್ರಿ ಮಾಡುತ್ತೇವೆ ಎಂದೆಲ್ಲಾ ಹೇಳುವುದಕ್ಕಿಂತ ಒಂದು ಕೆಲಸ ಮಾಡೋಣ.. ಡಿ.ಕೆ. ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆಗೋದಾದ್ರೆ ನಮ್ಮ 19 ಜೆಡಿಎಸ್ ಶಾಸಕರ ಬೆಂಬಲವನ್ನೂ ನೀಡುತ್ತೇವೆ'' ಎಂದು ಹೇಳುತ್ತಾ ಜೋರಾಗಿ ನಕ್ಕರು. 

''ಕಾಂಗ್ರೆಸ್ ನಲ್ಲಿ ಸದ್ಯದ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ'' ಎಂದು ಅವರು ವ್ಯಂಗ್ಯವಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News