ತುಂಬೆ ವಿದ್ಯಾ ಸಂಸ್ಥೆಗಳ 36ನೇ ವಾರ್ಷಿಕೋತ್ಸವ

Update: 2024-12-22 08:35 GMT

ಬಂಟ್ವಾಳ : ತುಂಬೆ ಪದವಿ ಪೂರ್ವ ಕಾಲೇಜಿನ 36ನೇ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಇದರ ಟ್ರಸ್ಟಿ ಬಿ.ಎಂ. ಅಶ್ರಫ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು, ನಿಕಟ ಪೂರ್ವ ಪ್ರಾಂಶುಪಾಲ ಕೆ. ಎನ್. ಗಂಗಾಧರ ಆಳ್ವ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯದ ಸ್ಟೇಟ್ ಎಲೈಡ್ ಆಂಡ್ ಹೆಲ್ತ್‌ಕೇರ್ ಕೌನ್ಸಿಲ್‌ನ ಚೆಯೆರ್‌ಮ್ಯಾನ್ ಡಾ| ಯು. ಟಿ. ಇಫ್ತಿಕಾರ್ ಫರೀದ್ ಅವರು, ತುಂಬೆ ಪ.ಪೂ. ಕಾಲೇಜಿನ ಅತೀ ಹೆಚ್ಚು ಅಂಕಗಳಿಸಿದ ಐವರು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪ್ಯಾರಾ ಮೆಡಿಕಲ್ ಸೀಟುಗಳನ್ನು ದೊರಕಿಸಿಕೊಡುವಲ್ಲಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಮುಖ್ಯ ಅತಿಥಿಯಾಗಿ ಡಾ| ಹರ್ಷಿತಾ ಕೆ. ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ವಿದ್ಯಾ ಕೆ., ಪಿ.ಟಿ.ಎ. ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಸದಸ್ಯರಾದ ಮ್ಯಾಕ್ಸಿಮ್ ಕುವೆಲ್ಲೋ, ಮೊಹಮ್ಮದ್‌ ಶಾಫಿ, ಕಛೇರಿ ಅಧೀಕ್ಷಕ ಅಬ್ದುಲ್ ಕಬೀರ್, ವಿದ್ಯಾರ್ಥಿ ನಾಯಕ ಸಲ್ಮಾನ್ ಫಾರಿಸ್‌, ನಾಯಕಿ ಅಸ್ನಾ ಮೆಹರಾಜ್‌, ಪ್ರಮುಖರಾದ ಶಿಫಾರತ್‌, ಝೈನಾಬ ಅಫ್ರ, ಮೊಹಮ್ಮದ್ ನುಮಾನ್‌, ಹಫಾ ಫಾತಿಮಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ದ್ವಿತೀಯ ಪಿಯುಸಿ ಹಾಗೂ 10 ನೇ ತರಗತಿ ವಿದ್ಯಾರ್ಥಿಗಳು ಮತ್ತು ರಾಷ್ಟ್ರ- ರಾಜ್ಯ ಮಟ್ಟದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ತುಂಬೆ ವಿದ್ಯಾ ಸಂಸ್ಥೆಗಳ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ಪ್ರಸ್ತುತಗೊಂಡವು

ಸಾಯಿರಾಮ್ ನಾಯಕ್ ಕೆ., ಜ್ಯೋತ್ಸ್ನಾ, ನಯನ, ವೀಣಾ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಮೊಹಮ್ಮದ್ ಯಾಸಿನ್ ಕಿರಾಅತ್ ಪಠಿಸಿದರು. ಉಪನ್ಯಾಸಕ ದಿನೇಶ ಶೆಟ್ಟಿ ಅಳಿಕೆ ಸ್ವಾಗತಿಸಿ, ಪ್ರಾಂಶುಪಾಲ ವಿ. ಎಸ್. ಭಟ್ ವರದಿ ವಾಚಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಎಸ್.ಶೆಟ್ಟಿ ವಂದಿಸಿ, ಉಪನ್ಯಾಸಕ ಅಬ್ದುಲ್ ರಹಿಮಾನ್‌ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು.



 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News