ಎನ್‌ಡಿಎ ಪರೀಕ್ಷೆ: ಆಳ್ವಾಸ್‌ನ 12 ವಿದ್ಯಾರ್ಥಿಗಳು ತೇರ್ಗಡೆ

Update: 2024-09-21 12:44 GMT

ಮೂಡುಬಿದಿರೆ : ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ 2024ರ ಸೆಪ್ಟೆಂಬರ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ.

ಪುನರ್ವ, ಸುಮನ್ ಭಟ್, ದುಷ್ಯಂತ್, ಆದಿತ್ಯ, ಅಖಿಲ್ ಜೆ.ಎಚ್., ನಿಖಿಲ್ ಭಟ್, ವಿಶ್ವವಿಜಿತ್, ವೈಭವ್, ರೋಶನ್ ಶೆಟ್ಟಿ, ದಿಗಂತ್, ಸಿದ್ಧಾಂತ್ ಮಠಪತಿ ಮತ್ತು ಆಕಾಶ್ ಪೂಜಾರ್ ಅವರು ಈ ಸಾಧನೆ ಮಾಡಿದ ವಿದ್ಯಾರ್ಥಿಗಳು.

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯು ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ರಾಷ್ಟೀಯ ರಕ್ಷಣಾ ಅಕಾಡೆಮಿ- ಎನ್‌ಡಿಎ) ಮತ್ತು ಇಂಡಿಯನ್ ನೇವಲ್ ಅಕಾಡೆಮಿ (ಭಾರತೀಯ ನೌಕಾ ಅಕಾಡೆಮಿ- ಐಎನ್ ಎ ) ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ಎನ್‌ಡಿಎ ಪರೀಕ್ಷೆಯು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿ ಸುವ ಅಭ್ಯರ್ಥಿಗಳಿಗೆ ಪ್ರವೇಶ ಬಾಗಿಲಿನಂತೆ ಕಾರ್ಯನಿರ್ವಹಿಸುತ್ತದೆ.

ಎನ್‌ಡಿಎ ಪರೀಕ್ಷೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News