ತುಂಬೆ: ನ.17ರಂದು ರಾಷ್ಟ್ರೀಯ ಶಿಕ್ಷಣ ದಿನಾಚರಣೆ
ಮಂಗಳೂರು, ನ.16: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಸಮನ್ವಯ ಶಿಕ್ಷಕರ ಸಂಘ ದ.ಕ. ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಘಟಕದ ಸಹಯೋಗದಲ್ಲಿ ಭಾರತರತ್ನ ಮೌಲಾನ ಅಬುಲ್ ಕಲಾಂ ಅಝಾದ್‌ರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ನ. 17 ರಂದು ಬೆಳಗ್ಗೆ 9ಕ್ಕೆ ತುಂಬೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
ಅಕಾಡಮಿ ಅಧ್ಯಕ್ಷ ಉಮರ್ ಯು.ಹೆಚ್. ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕ ಡಾ. ಮುಸ್ತಫ ಬಸ್ತಿಕೋಡಿ ಶೈಕ್ಷಣಿಕ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಮನ್ವಯ ಶಿಕ್ಷಕ ಪ್ರಶಸ್ತಿ -2024 ಪ್ರದಾನ, ನಿವೃತ ಶಿಕ್ಷಕರಿಗೆ ಸನ್ಮಾನ ಹಾಗೂ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಶಿಕ್ಷಕಿ ಹಸೀನ ಮಲ್ನಾಡ್‌ರ ಹನಿಗವನ ಸಂಕಲನ ಱಹನಿಗಡಲು ಕೃತಿಯನ್ನು ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿ. ಸುಬ್ರಹ್ಮಣ್ಯ ಭಟ್ ಹಾಗೂ ಱಬೆಲ್ಕಿರಿ ದ್ವೈಮಾಸಿಕ ಸಂಚಿಕೆಯನ್ನು ಸಾಹಿತಿ ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಬಿಡುಗಡೆ ಮಾಡಲಿದ್ದಾರೆ. ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.