ಕಾಸರಗೋಡು ದಸರಾ -2024ಕ್ಕೆ ಚಾಲನೆ

Update: 2024-10-06 12:48 GMT

ಕಾಸರಗೋಡು, ಅ.6: ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಉತ್ಸವವನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ಆಚರಿಸಿಕೊಂಡು ಬರುತ್ತಿರುವ ಕಾಸರಗೋಡು ದಸರಾ ಉತ್ಸವವನ್ನು ರಾಮನಗರದ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರ ಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

ಕಾಸರಗೋಡು ಪೇಟೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಟ್ರಸ್ಟಿ ಡಾ.ಕೆ.ಎನ್. ವೆಂಕಟರಮಣ ಹೊಳ್ಳ ಉದ್ಘಾಟಿಸಿದರು.

ಧಾರ್ಮಿಕ-ಸಾಂಸ್ಕೃತಿಕ ಸಂಘಟಕ ಕೆ.ಗುರುಪ್ರಸಾದ್ ಕೋಟೆಕಣಿ ದಿಕ್ಸೂಚಿ ಭಾಷಣಗೈದರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.

ಅತಿಥಿಯಾಗಿ ಕಾಸರಗೋಡು ನಗರಸಭೆಯ ಕೌನ್ಸಿಲರ್ ಶಾರದಾ, ನಿವೃತ ಅಧ್ಯಾಪಕ ನಾರಾಯಣ ಮಾಸ್ಟರ್ ಅಣಂಗೂರು, ಕಾಸರಗೋಡು ಅಡ್ಕತ್ತ ಬೈಲ್‌ನ ಮಹಾವಿದ್ಯಾದಾಯಿನಿ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ವಲ್ಲಿ ಎನ್.ಆರ್. ಭಾಗವಹಿಸಿದರು.

ಮಾಜಿ ಕೌನ್ಸಿಲರ್ ಶಂಕರ್ ಕೆ. ಜೆಪಿ ನಗರ ಸ್ವಾಗತಿಸಿದರು. ಕಾವ್ಯಾ ಕುಶಲ ವಂದಿಸಿದರು. ಕೆ. ಜಗದೀಶ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News