ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Update: 2024-09-22 15:16 GMT

ಬಂಟ್ವಾಳ : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕವು ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು ಇದರ ಸಹಯೋಗದಲ್ಲಿ ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ - 2024 ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯು ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ರವಿವಾರ ನಡೆಸಲಾಯಿತು.

ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿ ವಿ ಸುಬ್ರಹ್ಮಣ್ಯ ಭಟ್ ಮಾತನಾಡಿ, ಸಾಹಿತ್ಯ ಸಮ್ಮೇಳನವೆಂದರೆ ಅದು ಅವಿಸ್ಮರಣೀಯವಾಗಿ ಉಳಿಯುವಂಥದ್ದಾಗಿದೆ. ಹೋಬಳಿ, ತಾಲೂಕು, ಜಿಲ್ಲೆ ಅಥವಾ ಅಖಿಲ ಭಾರತ ಸಮ್ಮೇಳನವೆಂದು ತಾರತಮ್ಯ ಮಾಡಬೇಕಿಲ್ಲ. ಎಲ್ಲೆಡೆಯ ಸಾಹಿತ್ಯ ಪ್ರತಿಭೆಗಳಿಗೆ ಅವಕಾಶವೆಂಬ ವೇದಿಕೆ ಸಿದ್ಧ ವಾಗಬೇಕಾಗಿದೆ. ಮಂಚಿಯಂತಹ ಗ್ರಾಮೀಣ ಪ್ರದೇಶದಲ್ಲಿ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಆಯೋಜನೆಗೆ ಮನಸು ಮಾಡಿರುವ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇಲ್ಲಿನ ನಾಗರಿಕರು ಅಭಿನಂದನಾರ್ಹರು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಸಮಿತಿಯನ್ನು ರಚನೆ ಮಾಡಲಾಯಿತು. ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಲಯನ್ ಹಾಜಿ ಸುಲೈಮಾನ್ ನಾರ್ಶ, ಅಧ್ಯಕ್ಷರಾಗಿ ಲಯನ್ ಸತೀಶ್ ಆಳ್ವ ಬಾಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಉಪನ್ಯಾಸಕ ಎಂ ಡಿ ಮಂಚಿ, ಕೋಶಾಧಿಕಾರಿಯಾಗಿ ಹಾಜಿ ಸುಲೈಮಾನ್ ಜಿ ಸುರಿಬೈಲು ಇವರನ್ನು ಆಯ್ಕೆ ಮಾಡಲಾ ಯಿತು. ಹಾಗೂ ಇನ್ನಿತರ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಕೋಶಾಧಿಕಾರಿ ಡಿ.ಬಿ. ಅಬ್ದುಲ್ ರಹಿಮಾನ್, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ರಫ್, ಮಂಚಿ ಗ್ರಾಮ ಪಂಚಾ ಯತ್ ಅಧ್ಯಕ್ಷ ಜಿ.ಇಬ್ರಾಹಿಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ, ಕೊಳ್ನಾಡು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಿಟ್ಲ ಉಪಸ್ಥಿತರಿದ್ದರು.

ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಯನ್ ರಾಮ್ ಪ್ರಸಾದ್ ರೈ ತಿರು ವಾಜೆ ಸ್ವಾಗತಿಸಿ, ಉಪನ್ಯಾಸಕ ಎಂ ಡಿ ಮಂಚಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ವಂದಿಸಿದರು. ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ಘಟಕದ ಗೌರವ ಕಾರ್ಯದರ್ಶಿ ಲಯನ್ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News