ಮಲ್ಪೆ- ಆದಿ ಉಡುಪಿ ಹೆದ್ದಾರಿ ಕಾಮಗಾರಿ| 24 ಮಂದಿ ಭೂಮಾಲಕರಿಗೆ 2.83 ಕೋಟಿ ರೂ. ಪರಿಹಾರ ಖಾತೆಗೆ ಜಮಾ: ಶಾಸಕ ಯಶ್‌ಪಾಲ್ ಸುವರ್ಣ

Update: 2024-12-21 15:19 GMT

ಉಡುಪಿ, ಡಿ.21: ಆದಿಉಡುಪಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿ 169 ಎ ಅಭಿವೃದ್ಧಿ ಕಾಮಗಾರಿಗಾಗಿ ಭೂಸ್ವಾಧೀನ ಗೊಂಡಿ ರುವ ಜಮೀನಿನ ಪರಿಹಾರ ಮೊತ್ತಕ್ಕಾಗಿ ದಾಖಲೆ ಸಲ್ಲಿಸಿರುವ 24 ಮಂದಿ ಭೂ ಮಾಲಕರಿಗೆ ಒಟ್ಟು 2.83 ಕೋಟಿ ರೂ. ಪರಿಹಾರ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಮಲ್ಪೆ- ಆದಿಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ 214 ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗಿದ್ದು, ಅದರಲ್ಲಿ 19 ಸರಕಾರಿ ಜಾಗವಾಗಿದೆ. ಉಳಿದ 195 ಜಾಗಗಳ ಪೈಕಿ 103ಕ್ಕೆ ಕ್ಲೈಮ್‌ಗಳನ್ನು ಸ್ವೀಕರಿಸಲಾಗಿದ್ದು, ಪರಿಹಾರ ಪಾವತಿಗೆ ಕ್ರಮ ವಹಿಸಲಾಗಿದೆ. 44 ಭೂ ಮಾಲಕರು ದಾಖಲೆಗಳನ್ನು ಸಲ್ಲಿಸಲು ಬಾಕಿಯಿದೆ ಎಂದವರು ಹೇಳಿದ್ದಾರೆ.

ನಿಯಮಾನುಸಾರ 214 ಪ್ರಕರಣಗಳ ಎಲ್ಲಾ ಭೂಸ್ವಾದೀನ ಪ್ರಕ್ರಿಯೆ ಯನ್ನು ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಪರಿಹಾರ ಮೊತ್ತ ಪಡೆಯಲು ಬಾಕಿಯಿರುವ ಭೂ ಮಾಲಕರು ಕೂಡಲೇ ದಾಖಲೆ ಗಳನ್ನು ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.

ಮಲ್ಪೆ- ಆದಿಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿಗೆ ವಿಶೇಷ ಸಹಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ ಜನತೆಯ ಪರವಾಗಿ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News