ಮಂಗಳೂರು: ಎ.29ರಂದು ರೇಮಂಡ್ ಡಿಸೋಜ ಪ್ರೆಸ್ ಕ್ಲಬ್ ಗೌರವ ಅತಿಥಿ
Update: 2025-04-27 13:57 IST

ಮಂಗಳೂರು, ಎ.27: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಎ.29ರಂದು ಪೂರ್ವಾಹ್ನ 11:30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅಂತರ್ರಾಷ್ಟ್ರೀಯ ದೇಹದಾರ್ಢ್ಯಪಟು, ಮಿ.ವರ್ಲ್ಡ್ ಖ್ಯಾತಿಯ ರೇಮಂಡ್ ಡಿಸೋಜ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಹಿರಿಯ ಪತ್ರಕರ್ತ ಕೇಶವ ಕುಂದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.