ಕಾಟಿಪಳ್ಳ 3ನೇ ವಾರ್ಡ್ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ ಉದ್ಘಾಟನೆ

Update: 2025-02-19 22:42 IST

ಸುರತ್ಕಲ್: ಜನರ ಮಧ್ಯದಲ್ಲಿದ್ದು, ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ಮೂಲಕ ಪಕ್ಷ‌ಕಟ್ಟುವ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಐತ್‌ ಅಲಿ ಕಾರ್ಯಕರ್ತರಿಗೆ ಕರೆ ನೀಡಿದರು.

ಸುರತ್ಕಲ್‌ ಕಾಟಿಪಳ್ಳದ ಗಣೇಶಪುರ ದೇವಸ್ಥಾನ ಬಳಿಯ ಹವ್ವ ಬಿ ರೆಸಿಡೆನ್ಸಿಯಲ್ಲಿ ನೂತನವಾಗಿ ನಿರ್ಮಿಸಲಾದ ಕಾಟಿಪಳ್ಳ 3ನೇ ವಾರ್ಡ್ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯ ಉದ್ಘಾಟಿಸಿ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್‌ ಶಮೀರ್‌ ಕಾಟಿಪಳ್ಳ ಅವರು ಕಾಂಗ್ರೆಸ್‌ ಕಾರ್ಯಕರ್ತರೊಬ್ಬರಿಗೆ ಕೊಡ ಮಾಡಿದ ಆಟೊ ರಿಕ್ಷಾವನ್ನು ಹಸ್ತಾಂತರ ಮಾಡಿ ಅವರು ಮಾತನಾಡಿದರು.

ಮಂಗಳೂರು ಉತ್ತರದ ಎಲ್ಲಾ ವಾರ್ಡ್‌ ಗಳಲ್ಲೂ ವಾರ್ಡ್‌ ಕಚೇರಿಗಳನ್ನು ತೆರೆದು ಜನರ ಅಹವಾಲುಗಳನ್ನು ಸ್ವೀಕರಿಸುವ ಕೆಲಸಮಾಡಲಾಗುವುದು. ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು, ಅವರೇ ಪಕ್ಷದ ಆಸ್ತಿ. ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಮುಖಂಡರು ಮಾಡಬೇಕು. ಮುಖಂಡರು, ಕಾರ್ಯಕರ್ತರು ಜನರ ಮಧ್ಯದಲ್ಲಿದ್ದು ಅವರ ಕಷ್ಟ ಸುಖಗಳಲ್ಲಿ ಪಾಲುದಾರರಾಗುವ ಮೂಲಕ ಪಕ್ಷವನ್ನು ಕಟ್ಟುವ ಕೆಲಸಮಾಡಬೇಕೆಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ವಹಿಸಿದ್ದರು. ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್‌ ಶಮೀರ್‌, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್, ಪ್ರಧಾನ ಕಾರ್ಯದರ್ಶಿ ಶಶಿಕಲಾ ಪದ್ಮನಾಭ, ಕೆಪಿಸಿಸಿ ಸದಸ್ಯ ಸದಾಶಿವ ಶೆಟ್ಟಿ, ಮಾಜಿ ಮೇಯರ್ ಗುಲ್ಝಾರ್ ಬಾನು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್ ಹಮೀದ್, ಕೆಪಿಸಿಸಿ ಹಿಂದುಳಿದ ವರ್ಗದ ಕಾರ್ಯದರ್ಶಿ ದೀಪಕ್ ಪೆರ್ಮುದೆ, 3ನೇ ವಲಯಾಧ್ಯಕ್ಷ ನಿತ್ಯಾನಂದ, ಮಾಜಿ ಕಾರ್ಪೊರೇಟರ್ ಬಶೀರ್ ಅಹ್ಮದ್, ಮೂಡ ಸದಸ್ಯ ಅಬ್ದುಲ್ ಜಲೀಲ್, ಯುವ ಕಾಂಗ್ರೆಸ್ ಮುಖಂಡ ಸುಹೇಲ್ ಕಂದಕ್, ಜಲೀಲ್‌ ಬದ್ರಿಯಾ ಮೊದಲಾದವರು ಉಪಸ್ಥಿತರಿದ್ದರು.





Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News