ಮುಂದಿನ 3 ಗಂಟೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ
Update: 2025-04-27 20:32 IST

ಮಂಗಳೂರು, ಎ.27: ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಈ ಜಿಲ್ಲೆಗಳ ಪೈಕಿ ಒಂದು ಅಥವಾ ಎರಡು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.