ಡಿ. 3-4ರ ಬಹುಸಂಸ್ಕೃತಿ ಉತ್ಸವ ಮುಂದೂಡಿಕೆ
Update: 2024-12-02 15:56 GMT
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ ಕರ್ನಾಟಕ ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ, ಕೊಡವ, ಯಕ್ಷಗಾನ ಅಕಾಡಮಿಗಳು ದ.ಕ., ಉಡುಪಿ, ಕೊಡಗು ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಡಿ.೩ ಮತ್ತು ೪ರಂದು ನಗರದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮವನ್ನು ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.