ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಅಸವಿಂಧಾನಿಕ: ಸಂಸದ ಬ್ರಿಜೇಶ್ ಚೌಟ

Update: 2025-03-17 20:45 IST
ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಅಸವಿಂಧಾನಿಕ: ಸಂಸದ ಬ್ರಿಜೇಶ್ ಚೌಟ

ಬ್ರಿಜೇಶ್ ಚೌಟ

  • whatsapp icon

ಮಂಗಳೂರು, ಮಾ.17: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4ರಷ್ಟು ಮೀಸಲಾತಿ ಅಸವಿಂಧಾನಿಕ ಎಂದು ಅಭಿಪ್ರಾಯಪಟ್ಟಿರುವ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಸಮಾಜವನ್ನು ಜಾತಿ-ಮತದ ಆಧಾರದಲ್ಲಿ ವಿಭಜಿಸುವ ಸಿಎಂ ಸಿದ್ದರಾಮಯ್ಯ ಸರಕಾರದ ನಡೆಯನ್ನು ಖಂಡಿಸಿ ಬಿಜೆಪಿ ಸಂಸತ್ತಿನ ಒಳಗೆ, ಹೊರಗೆ ತೀವ್ರ ಹೋರಾಟವನ್ನು ಮಾಡಲಿದೆ ಎಂದು ಹೇಳಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಯನ್ನು ಕಲ್ಪಿಸುವ ಕೆಲಸವನ್ನು ಮಾಡಿದ್ದರು. ಆದರೆ, ಅಹಿಂದ ಪರ ಎನ್ನುವ ಮುಖವಾಡ ಹಾಕಿಕೊಂಡಿ ರುವ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಹಿಂದುಳಿದ ಸಮುದಾಯಗಳಿಗೆ ದ್ರೋಹ ಬಗೆಯುವ ಹಾಗೂ ಈ ಮೂಲಕ ಪಿಎಫ್‌ಐ ಮತ್ತು ಎಸ್ಡಿಪಿಐ ಸಂಘಟನೆಯ ಮೇಲಿನ ಋಣ ತೀರಿಸುವ ಕೆಲಸವನ್ನು ಮಾಡಿ ದ್ದಾರೆ. ಈ ಅಸಂವಿಧಾನಿಕ ತೀರ್ಮಾನವನ್ನು ಹಿಂಪಡೆಯುವವರೆಗೂ ಬಿಜೆಪಿ ಹೋರಾಟವನ್ನು ನಡೆಸಲಿದೆ ಎಂದು ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ವಿಶೇಷವಾದ ಮೀಸಲಾತಿ ಕೊಟ್ಟು ಸಮಾಜವನ್ನು ಮತಗಳ ಆಧಾರದಲ್ಲಿ ಒಡೆಯುವ ಸಿದ್ದರಾಮಯ್ಯ ಸರ್ಕಾರದ ಈ ಘೋಷಣೆಯನ್ನು ರದ್ದುಗೊಳಿಸುವಂತೆ ಶೀಘ್ರದಲ್ಲೇ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗುತ್ತದೆ. ಆ ಮೂಲಕ ಕಾನೂನಾತ್ಮಕವಾಗಿಯೂ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ಹೊರಟಿರುವುದನ್ನು ರದ್ದುಪಡಿಸುವುದಕ್ಕೆ ಬಿಜೆಪಿ ಪಕ್ಷ ನಿರ್ಧರಿಸಿದೆ. ಬಜೆಟ್ ನಲ್ಲಿ ಮುಖ್ಯಮಂತ್ರಿ ಅಲ್ಪಸಂಖ್ಯಾತರ ಕಾಲನಿ ಅಭಿವೃದ್ಧಿ ನಿಧಿ ಎನ್ನುವ ಒಂದು ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನೂ ಘೋಷಿಸಿದ್ದಾರೆ. ಅಂಬೇಡ್ಕರ್ ಆಶಯಗಳಿಗೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಮ್ಮ ಸಂವಿಧಾನವನ್ನೇ ಒಡೆಯುವ ಕೆಲಸಕ್ಕೆ ಸಿದ್ದರಾಮಯ್ಯನವರು ಕೈ ಹಾಕಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯವನ್ನು ‘ಸಾಮಾಜಿಕ ಪ್ರತ್ಯೇಕೀಕರಣ ‘ ಮಾಡಲು ಹೊರಟಿದ್ದು, ಬಿಜೆಪಿ ಇದನ್ನು ಸ್ಪಷ್ಟ ಶಬ್ಧಗಳಿಂದ ಖಂಡಿಸುತ್ತದೆ ಎಂದು ಬ್ರಿಜೇಶ್ ಚೌಟ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News