ಮಂಗಳೂರು: ವಸತಿ ಸಮುಚ್ಚಯದ 5ನೇ ಮಹಡಿಯಿಂದ ಬಿದ್ದು ಬಾಲಕ ಮೃತ್ಯು
Update: 2025-03-15 23:10 IST

ಮಂಗಳೂರು: ನಗರದ ಕೊಂಚಾಡಿಯ ಮೇರಿ ಹಿಲ್‌ನಲ್ಲಿರುವ ವಸತಿ ಸಮುಚ್ಚಯದ ಐದನೇ ಮಹಡಿಯಿಂದ ಬಿದ್ದು 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ ಎದುರಿನ ವಸತಿ ಸಮುಚ್ಚಯದಲ್ಲಿ ಬೆಳಗ್ಗೆ 5:30 ರಿಂದ 6:50ರ ನಡುವೆ ಈ ಘಟನೆ ನಡೆದಿದೆ. ತನ್ನ ಕುಟುಂಬದೊಂದಿಗೆ ವಾಸವಾಗಿದ್ದ ಬಾಲಕ ಐದನೇ ಮಹಡಿಯಿಂದ ಬಿದ್ದು ತೀವ್ರ ಗಾಯಗೊಂಡಿದ್ದು, ತಕ್ಷಣ ಆತನ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.