ಅಕ್ರಮ ಮರಳುಗಾರಿಕೆ ಆರೋಪ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

Update: 2024-11-07 14:59 GMT

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News