ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಸ್ಥಾನಮಾನಕ್ಕೆ ಆಗ್ರಹ: ಎ.7ರಂದು ಸಿಎಂ ಭೇಟಿಗೆ ನಿರ್ಧಾರ
Update: 2025-04-04 19:07 IST

ಸಿಎಂ ಸಿದ್ದರಾಮಯ್ಯ
ಮಂಗಳೂರು, ಎ.4: ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎ.7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆಗಳ ಪ್ರಮುಖರ ಸಮ್ಮುಖ ಅಖಿಲ ಅಮೇರಿಕ ತುಳುವರ ಅಂಗಣದ ಮುಖಂಡರು ನಿರ್ಧರಿಸಿದ್ದಾರೆ.
ಅದಕ್ಕೂ ಮೊದಲು ಮುಂಬೈಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಘಟನೆಯ ಮುಖಂಡ ಭಾಸ್ಕರ ಶೇರಿಗಾರ್ ಭೇಟಿ ಮಾಡಲಿದ್ದಾರೆ. ಬಳಿಕ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲು ನಿರ್ಧರಿ ಸಲಾಗಿದೆ. ಮನವಿ ಸಲ್ಲಿಸಿದ ಬಳಿಕ ಯಾವ ರೀತಿ ಹೋರಾಟ ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕಿದೆ ಎಂದು ಸರ್ವೋತ್ತಮ ಶೆಟ್ಟಿ ಅಬುದಾಬಿ ತಿಳಿಸಿದ್ದಾರೆ.