ಮಂಗಳೂರು: ಜ.9ರಂದು ಪತ್ರಕರ್ತ ಮೊಹಮ್ಮದ್ ಝುಬೇರ್ ಭೇಟಿ
Update: 2025-01-08 15:20 GMT
ಮಂಗಳೂರು, ಜ.8: ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈದಿನ ಡಾಟ್ ಕಾಮ್ ಡಿಜಿಟಲ್ ಮಾಧ್ಯಮ ಸಂಸ್ಥೆಯು ಪ್ರಕಟಿಸಿರುವ ನಮ್ಮ ಕರ್ನಾಟಕ ನಡೆದ 50 ಹೆಜ್ಜೆ... ಮುಂದಿನ ದಿಕ್ಕು ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್ ಆಪ್ ಬಿಡುಗಡೆ ಕಾರ್ಯಕ್ರಮವು ಜ.9ರಂದು ಸಂಜೆ 4ಕ್ಕೆ ನಗರದ ಬಲ್ಮಠದ ಕರ್ನಾಟಕ ಥಿಯಾಲಾಜಿಕಲ್ ಕಾಲೇಜು ಆವರಣದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.