ಅ.1: ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

Update: 2024-09-29 14:46 GMT

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ. ಜಿಲ್ಲಾಡಳಿತ, ದ.ಕ.ಜಿಪಂ, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಭಾಗಿತ್ವದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನವು ಅ.1ರಂದು ಬೆಳಗ್ಗೆ 10ಕ್ಕೆ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.

ದ.ಕ.ಜಿಪಂ ಸಿಇಒ ಕಾರ್ಯನಿರ್ವಹಣಾ ಅಧಿಕಾರಿ ಡಾ. ಆನಂದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ವಿತರಿಸಲಿದ್ದಾರೆ.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೋ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News