ಎ.12: ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡ ʼಬಹರ್-ಎ-ನೂರ್ʼ ಲೋಕಾರ್ಪಣೆ

Update: 2025-04-10 18:46 IST
ಎ.12: ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡ ʼಬಹರ್-ಎ-ನೂರ್ʼ ಲೋಕಾರ್ಪಣೆ
  • whatsapp icon

ಮಂಗಳೂರು, ಎ.10: ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ ಉತ್ತರ ದಕ್ಕೆ, ಬಂದರು ಇದರ ನೂತನ ಕಟ್ಟಡ ಱಬಹರ್-ಎ-ನೂರ್‌ೞ ಎ.12ರಂದು ಲೋಕಾರ್ಪಣೆಗೊಳ್ಳಲಿದೆ.

ಅಂದು ಬೆಳಗ್ಗೆ 10ಕ್ಕೆ ಮಂಗಳೂರು ಬಂದರಿನ ದಕ್ಷಿಣ ದಕ್ಕೆ ಮೀನುಗಾರಿಕಾ ಬಂದರಿನ ಮುಖ್ಯದ್ವಾರದ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್ ಕಟ್ಟಡ ಉದ್ಘಾಟಿಸಲಿದ್ದಾರೆ. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಮಂಕಾಳ ಎಸ್.ವೈದ್ಯ ಮಂಜುಗಡ್ಡೆ ಸ್ಥಾವರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಚೇರಿ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಸಭಾಭವನ ಉದ್ಘಾಟಿಸಲಿದ್ದಾರೆ.

ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮನಪಾ ಆಯುಕ್ತ ರವಿಚಂದ್ರ ನಾಯಕ್, ಮಂಗಳೂರು ಬಂದರು ಅಧಿಕಾರಿ ಕ್ಯಾಪ್ಟನ್ ಸಿ.ಸ್ವಾಮಿ, ಮೀನುಗಾರಿಕಾ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕೆ., ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಎನ್.ರಮೇಶ್, ಮನಪಾ ವಿಪಕ್ಷ ಮಾಜಿ ನಾಯಕರಾದ ಅಬ್ದುಲ್ ರವೂಫ್, ಎ.ಸಿ. ವಿನಯರಾಜ್, ಮಾಜಿ ಮೇಯರ್‌ಗಳಾದ ಎಂ. ಶಶಿಧರ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಮಾಜಿ ಸದಸ್ಯರಾದ ಅಬ್ದುಲ್ ಲತೀಫ್ ಕಂದಕ್, ಶಂಶುದ್ದೀನ್, ಚಾರ್ಟಡ್ ಅಕೌಂಟೆಂಟ್ ಪ್ರವೀಣ್ ಕುಮಾರ್ ಶೆಟ್ಟಿ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಹಂಪನಕಟ್ಟೆ ಶಾಖೆಯ ಮುಖ್ಯ ಪ್ರಬಂಧಕಿ ಪಾವೈ ಅರಸಿ, ಪರ್ಸಿನ್ ಬೋಟ್ ಯೂನಿಯನ್ ಅಧ್ಯಕ್ಷ ಅನಿಲ್ ಕುಮಾರ್, ಮಂಗಳೂರು ಹಸಿಮೀನು ಯೂನಿಯನ್ ಅಧ್ಯಕ್ಷ ಕೆ.ಎಲ್.ಇಸ್ಮಾಯಿಲ್, ಒಣಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಹ್ಮದ್, ಮಂಗಳೂರು ಅಲ್ಪಸಂಖ್ಯಾತ ಮೀನುಗಾರರ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಹಿಮಾನ್, ವಕೀಲ ಉದಯಾನಂದ ಎ., ಟ್ರಾಲ್‌ಬೋಟ್ ಯೂನಿಯನ್ ಅಧ್ಯಕ್ಷ ಚೇತನ್ ಬೆಂಗರೆ, ಗಿಲ್‌ನೆಟ್ ಮೀನುಗಾರರ ಸಂಘದ ಅಧ್ಯಕ್ಷ ಹನೀಫ್, ಸೀಫುಡ್ ಬೈಯರ್ಸ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಎಂ.ಇಬ್ರಾಹಿಂ, ಕಮಿಷನ್ ಏಜೆಂಟ್ ಅಧ್ಯಕ್ಷ ಕೆ.ಅಶ್ರಫ್, ಟ್ರಾಲ್‌ಬೋಟ್ ಯೂನಿಯನ್ ಅಧ್ಯಕ್ಷ ನಿತಿನ್‌ಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News