ಎ.12: ಮಂಗಳೂರು-ಕಬಕ -ಪುತ್ತೂರು ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ; ಸಚಿವ ಸೋಮಣ್ಣ ಚಾಲನೆ

Update: 2025-04-10 19:56 IST
ಎ.12: ಮಂಗಳೂರು-ಕಬಕ -ಪುತ್ತೂರು ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ; ಸಚಿವ ಸೋಮಣ್ಣ ಚಾಲನೆ
  • whatsapp icon

ಮಂಗಳೂರು, ಎ.10; ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ಎ.12ರಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಸಂಜೆ 4 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ.

ಕಳೆದ ಒಂದು ದಶಕದಿಂದ ಬೇಡಿಕೆ ಉಳಿದಿದ್ದ ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ಶ್ಲಾಘಿಸಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆ ಜನತೆಯ ಪರವಾಗಿ ವಿಶೇಷ ಧನ್ಯವಾದವನ್ನು ಸಲ್ಲಿಸಿದ್ದಾರೆ. ಜತೆಗೆ ರೈಲ್ವೆ ಮಂಡಳಿ, ನೈರುತ್ಯ ಹಾಗೂ ದಕ್ಷಿಣ ರೈಲ್ವೆ ಅಧಿಕಾರಿಗಳಿಗೂ ಧನ್ಯವಾದ ಸಲ್ಲಿಸಿದ್ದಾರೆ.

ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ಸುಗಮಗೊಳಿಸುವ ಯೋಜನೆಗೆ ಸಂಬಂಧಿಸಿ ದಂತೆ ಬಹಳ ಜರೂರಾಗಿ ಆಗಬೇಕಾಗಿರುವ ಈ ಶಿರಾಡಿ ಘಾಟಿ ಯೋಜನೆ ಬಾಕಿಯಿರುವ ಆಡಳಿತಾತ್ಮಕ ಅನುಮತಿಗಳನ್ನು ಆದಷ್ಟು ಬೇಗ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಈ ಯೋಜನೆ ಪೂರ್ಣಗೊಂಡರೆ, ಪ್ರವಾಸೋದ್ಯಮ, ವ್ಯಾಪಾರ-ವಹಿವಾಟು, ಕೈಗಾರಿಕೆಗಳ ಅಭಿವೃದ್ಧಿಯ ಜತೆಗೆ ಔದ್ಯೋಗಿಕವಾಗಿ ಮತ್ತು ಆರ್ಥಿಕ ಬೆಳವಣಿಗೆಗೂ ಕರಾವಳಿ-ಮಲೆನಾಡು ಭಾಗಕ್ಕೆ ಹೆಚ್ಚಿನ ಅನುಕೂಲ ವಾಗಲಿದೆ ಎಂದಿದ್ದಾರೆ. ಶಿರಾಡಿ ಘಾಟಿ ಪ್ರಾಜೆಕ್ಟ್‌ಗೆ ಸಂಬಂಧಿಸಿದಂತೆ ಹಾಲಿ ಡಿಪಿಆರ್ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪೆರಿಯಶಾಂತಿ-ಉಜಿರೆ,ಗುರುವಾಯನಕೆರೆ ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಗೆ ಕೇಂದ್ರ ಸಚಿವ ಗಡ್ಕರಿಯವರಿಗೆ ಮನವಿ ಸಲ್ಲಿಸಲಾಗಿದೆ. ಸುರತ್ಕಲ್-ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಂದರು ಸಂಪರ್ಕ ರಸ್ತೆ ಯಾಗಿ ಅಭಿವೃದ್ಧಿ ಪಡಿಸಲು 26 ಕೋಟಿ ಮಂಜೂರಾಗಿದೆ ಮತ್ತು ಟೆಂಡರ್ ಆಗಿದೆ ಮಳೆಗಾಲದ ಮೊದಲು ಕಾಮಗಾರಿ ಪೂರ್ಣ ವಾಗಲಿದೆ ಮತ್ತು ಇದನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡಿಸಲು ಸಚಿವರಿಗೆ ಮನವಿ ಮಾಡಲಾಗಿದೆಎಂದು ಸಂಸದ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಅಭಿವೃದ್ಧಿಗೆ 45 ಎಕರೆ ಜಾಗದಲ್ಲಿ ಅದಾನಿ ಸಂಸ್ಥೆಯ ಸಹಯೋಗದ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದ ಬೃಜೇಶ್ ಚೌಟ ತಿಳಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಜಾರಿ ಮಾಡಲು ಮುಂದಾದ ಪ್ರಧಾನಿಯ ಕ್ರಮವನ್ನು ಸ್ವಾಗತಿ ಸುವುದಾಗಿ ‌ಚೌಟ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಬಿಜೆಪಿ ಪದಾಧಿಕಾ ರಿಗಳಾದ ಪ್ರೇಮಾನಂದ ಶೆಟ್ಟಿ, ಸಂಜಯ ಪ್ರಭು, ಅರುಣ್ ರಾಜ್,ಮೋಹನ್ ಶೇಟ್ ,ವಸಂತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News